ನಮ್ಮ ಮೆಟ್ರೋದಲ್ಲಿ ಇನ್ಮುಂದೆ ಕ್ಯೂಆರ್ ಕೋಡ್ ಟಿಕೆಟ್​ ವ್ಯವಸ್ಥೆ..!

Webdunia
ಶನಿವಾರ, 27 ಆಗಸ್ಟ್ 2022 (13:47 IST)
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಹಾಯವಾಗುವಂತಹ ಹತ್ತು ಹಲವು ವಿನೂತನ ಯೋಜನೆಗಳನ್ನು ಬಿಎಂಆರ್​​​​​ಸಿಎಲ್​​​  ಜಾರಿ ಮಾಡುತ್ತಾ ಬಂದಿದೆ. ಸದ್ಯ ಮತ್ತೊಂದು ಹೊಸ ಯೋಜನೆ ಜಾರಿ ಮಾಡಲು ನಮ್ಮ ಮೆಟ್ರೋ ಮುಂದಾಗಿದ್ದು, ಮುಂದಿನ ತಿಂಗಳ ಅಂತ್ಯಕ್ಕೆ ಕ್ಯೂ ಆರ್ ಕೋಡ್ ಆಧಾರಿತ ಟಿಕೆಟ್​ ವ್ಯವಸ್ಥೆಯನ್ನು ಜಾರಿಗೆ ತರಲಿದೆ. ಈಗಾಗಲೇ ಟೋಕನ್​, ಸ್ಮಾರ್ಟ್ ಕಾರ್ಡ್ ಮತ್ತು ಪಾಸ್​ನ್ನು ಬಳಸಿ ಪ್ರಯಾಣಿಸಲು ನಮ್ಮ ಮೆಟ್ರೋ ಅವಕಾಶ ಕಲ್ಪಿಸಿದೆ. ಈಗ ಇನ್ನೊಂದು ಹೊಸ ಮಾದರಿಯ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ. ನಮ್ಮ ಮೆಟ್ರೋದಲ್ಲಿ ಟಿಕೆಟ್​​​ಗಾಗಿ ಉದ್ದುದ್ದ ಸಾಲಿನಲ್ಲಿ ನಿಂತುಕೊಳ್ಳಬೇಕಾಗಿತ್ತು. ಆದರೆ ಇನ್ಮುಂದೆ ನಿಮ್ಮ ಮೊಬೈಲ್ ಮೂಲಕವೇ ಟಿಕೆಟ್ ಖರೀದಿಸುವ ವ್ಯವಸ್ಥೆಯನ್ನು ಮೆಟ್ರೋ ನಿಗಮ ಮಾಡುತ್ತಿದೆ. ಈ ಕ್ಯೂ ಆರ್ ಕೋಡ್​ ಆಧಾರಿತ ಟಿಕೆಟ್​ ವ್ಯವಸ್ಥೆಯಿಂದ ಚಿಲ್ಲರೆ ನೀಡುವ ಸಮಸ್ಯೆಯೂ ದೂರವಾಗಲಿದೆ. ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುವ ಉಪಕರಣ ಮತ್ತು  ವ್ಯವಸ್ಥೆಯನ್ನು ಮೆಟ್ರೋ ನಿಲ್ದಾಣಗಳಲ್ಲಿ ಅಳವಡಿಸಲಾಗ್ತಿದೆ. ಮುಂದಿನ ಕೆಲ ದಿನಗಳಲ್ಲಿ ವ್ಯವಸ್ಥೆಯ ಪರೀಕ್ಷೆ ನಡೆಯಲಿದ್ದು, ಎಲ್ಲವೂ ಸರಾಗವಾಗಿ ಸಾಗಿದರೆ ಸೆಪ್ಟೆಂಬರ್ ಅಂತ್ಯಕ್ಕೆ ಕ್ಯೂಆರ್ ಕೋಡ್ ವ್ಯವಸ್ಥೆ ಜಾರಿಗೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದತ್ತಪೀಠದ ಮಾಣಿಕ್ಯಾಧಾರ ಬಳಿ ಬಾಲಕಿ ಮಿಸ್ಸಿಂಗ್ ಕೇಸ್‌: ಕುತೂಹಲ ಮೂಡಿಸಿದ ಬಾಲಕಿ ತಾಯಿ ಹೇಳಿಕೆ

31ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಅನಂತ್ ಅಂಬಾನಿ, ಪ್ರಾಣಿಗಳಿಗೆ ಭರ್ಜರಿ ಬಾಡೂಟ

ಭಾರೀ ಚರ್ಚೆ ಹುಟ್ಟು ಹಾಕಿದ್ದ ಉದ್ಯಮಿ ಸಿಜೆ ರಾಯ್‌ ಆತ್ಮಹತ್ಯೆಗೆ ಕಾರಣ ಬಯಲು

ಇಸ್ರೇಲ್ ಗೆ ಶಾಪ ಹಾಕಿದ ಪಾಕಿಸ್ತಾನ ಸಚಿವ ಆಸಿಫ್ ಖ್ವಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments