Publish Date: Fri, 12 Jul 2019 (17:56 IST)
Updated Date: Fri, 12 Jul 2019 (17:58 IST)
ಆಸ್ತಿಗಾಗಿ ಸವತಿಯರಿಬ್ಬರ ನಡುವೆ ಮಾರಾಮಾರಿ ನಡೆದಿದೆ.
ಮಂಡ್ಯ ಜಿಲ್ಲೆಯ ಬೂಕನಕೆರೆ ಹೋಬಳಿಯ ಚಿಕ್ಕಗಾಡಿಗನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ಸವತಿಯರ ನಡುವೆ ಗಲಾಟೆ ನಡೆದಿದೆ. ಈ ಘರ್ಷಣೆಯಲ್ಲಿ ಹಿರಿಯ ಹೆಂಡತಿ ಲಕ್ಷ್ಮೀ(35) ಅವರಿಗೆ ಕಿರಿಯ ಹೆಂಡತಿ ಮಂಜಮ್ಮ, ಪತಿ ಕೃಷ್ಣಯ್ಯ ಮತ್ತು ಮಗ ಅವಿಕಿರಣ ಅವರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ.
ಮಚ್ಚು ಮತ್ತು ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಲಕ್ಷ್ಮೀಯ ತಲೆ ಮತ್ತು ಎದೆಯ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಕ್ಷಣೆ ಕೋರಿ ಗ್ರಾಮಾಂತರ ಪೊಲೀಸ್ ಠಾಣೆಗೆ ಲಕ್ಷ್ಮೀ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಸಬ್ ಇನ್ಸ್ ಪೆಕ್ಟರ್ ಆನಂದೇಗೌಡ ಮುಂದಿನ ತನಿಖೆ ಕೈಗೊಂಡಿದ್ದಾರೆ.