Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜಲಕ್ಷಾಮವಿರುವಾಗ ಗ್ಯಾರಂಟಿ ಯೋಜನೆ ಬೇಕಿತ್ತಾ? ಸರ್ಕಾರಕ್ಕೆ ಆರ್ ಅಶೋಕ್ ಚಾಟಿ

R Ashok

Krishnaveni K

ಬೆಂಗಳೂರು , ಸೋಮವಾರ, 11 ಮಾರ್ಚ್ 2024 (16:08 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದಲ್ಲಿ ನೀರಿನ ಬವಣೆ ತಾರಕಕ್ಕೇರಿರುವಾಗ ರಾಜ್ಯ ಸರ್ಕಾರ ಗ್ಯಾರಂಟಿ ಉತ್ಸವಗಳನ್ನು ಮಾಡುವುದರಲ್ಲಿ ಬ್ಯುಸಿಯಾಗಿದೆ ಎಂದು ವಿಪಕ್ಷ  ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಆರ್. ಅಶೋಕ್ ‘ರಾಜ್ಯದಲ್ಲಿ ಜಲಕ್ಷಾಮದ ಸೂತಕ, ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಉತ್ಸವ’ ಎಂದಿದ್ದಾರೆ. ಅಜ್ಜಿಗೆ ಅರಿವೆ ಚಿಂತೆಯಾದರೆ ಮೊಮ್ಮಗಳಿಗೆ ಇನ್ನೇನೋ ಚಿಂತೆ ಎಂಬಂತೆ ಇಲ್ಲಿ ಜನ ಜಲಕ್ಷಾಮದಿಂದ ಹನಿ ನೀರಿಗೂ ಹಾಹಾಕಾರ ಪಡುತ್ತಿದ್ದರೆ ಅತ್ತ  ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಜನರ ದುಡ್ಡಿನಲ್ಲಿ ಜಾತ್ರೆ ಮಾಡುತ್ತಿದ್ದಾರೆ’ ಎಂದಿದ್ದಾರೆ.

‘ರಾಜ್ಯದಲ್ಲಿ 90 ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷಾಂತರ ಕೃಷಿ ಕಾರ್ಮಿಕರು ಹೊಟ್ಟೆಪಾಡಿಗಾಗಿ ಊರು ಬಿಟ್ಟು ಗುಳೇ ಹೊರಟಿದ್ದಾರೆ. 40 ಕ್ಕೂ ಹೆಚ್ಚು ನೇತಾರರು ದಿಕ್ಕು ಕಾಣದೇ ಜೀವ ಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಜನ ತೊಟ್ಟು ನೀರಿಗೂ ಪರದಾಡುತ್ತಿದ್ದಾರೆ. ರಾಜ್ಯದಲ್ಲಿ ಇಂತಹ ಸೂತಕದ ಛಾಯೆ ಇರುವಾಗ ಗ್ಯಾರಂಟಿ ಸಮಾವೇಶದ ಹೆಸರಿನಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ, ಪ್ರತಿ ಜಿಲ್ಲೆಗೆ 1 ಕೋಟಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಭಾಗವಹಿಸುವ ಕಾರ್ಯಕ್ರಮಗಳಿಗೆ 2 ಕೋಟಿ ಖರ್ಚು ಮಾಡುತ್ತಿದ್ದೀರಲ್ಲಾ? ನಿಮಗೆ ಕಿಂಚಿತ್ತಾದರೂ ಮಾನವೀಯತೆ ಇದೆಯೇ?’ ಎಂದು ಅಶೋಕ್ ಕಿಡಿ ಕಾರಿದ್ದಾರೆ.

‘ಗ್ಯಾರಂಟಿ ಯೋಜನೆ ಸಮಾವೇಶ ಹೆಸರಿನಲ್ಲಿ ನೂರಾರು ಕೋಟಿ ಪೋಲು ಮಾಡುವ ಬದಲು ಜನರಿಗೆ ನೀರಿನ ವ್ಯವಸ್ಥೆ ಮಾಡಿಕೊಡಬಹುದಲ್ಲವೇ? ಅದೇ ದುಡ್ಡಿನಲ್ಲಿ ರೈತರಿಗೆ ಬರ ಪರಿಹಾರ ಕೊಡಬಹುದಿತ್ತಲ್ಲವೇ? ರಾಜ್ಯದ ಜನತೆ ಇಲ್ಲಿ ಅವಸ್ಥೆ ಪಡುತ್ತಿದ್ದರೆ ನಿಮಗೆ ಚುನಾವಣಾ ಗಿಮಿಕ್ ಗಳೇ ಹೆಚ್ಚಾಯಿತೇ? ಎಂದು ಪ್ರಶ್ನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಂವಿಧಾನ ಬದಲಾದರೆ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ