ಸಚಿವ ಆರ್.ಅಶೋಕ್ ಅವರು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬನ್ನೇರುಘಟ್ಟ ಮತ್ತು ಮಂಟಪ ಗ್ರಾಮ ಪಂಚಾಯತಿ ಸದಸ್ಯರೊಂದಿಗೆ ಬನ್ನೇರುಘಟ್ಟದಲ್ಲಿ ಸಭೆ ನಡೆಸಿದರು.
ಈ ವೇಳೆ ಮತನಾಡಿ, ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೋಪಿನಾಥ್ ರೆಡ್ಡಿಯವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಎಂ ಕೃಷ್ಣಪ್ಪ, ಮುಖಂಡರಾದ ಎಸ್ ಕೆ ನಟರಾಜ್, ಮಣಿ, ಲಕ್ಷ್ಮೀಕಾಂತ, ಸಂಗಾತಿ ವೆಂಕಟೇಶ್, ಜಯರಾಮ್ ಮತ್ತು ಮಂಡಲ ಪದಾಧಿಕಾರಿಗಳು ಉಪಸ್ಥಿತರಿದ್ದರು.