ಬೆಂಗಳೂರು : ರಾಗಿಣಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ಯ ಬಿಜೆಪಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ಸ್ಯಾಂಡಲ್ ವುಡ್ ನಟಿ ರಾಗಿಣಿ ಇದೀಗ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಸಿಲುಕಿಹಾಕಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಈ ಹಿಂದೆ ಬಿಜೆಪಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ರಾಗಿಣಿ ತೊಡಗಿಕೊಂಡ ಕಾರಣ ಅವರನ್ನು ಬಿಜೆಪಿ ಸದಸ್ಯರೆಂದು ಬೊಟ್ಟುಮಾಡಿ ತೋರಿಸುತ್ತಿದ್ದಾರೆ.
ಈ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ, ನಟಿ ರಾಗಿಣಿ ಬಿಜೆಪಿ ಸದಸ್ಯರಲ್ಲ. ರಾಗಿಣಿಗೆ ಚುನಾವಣಾ ಕಾರ್ಯಭಾರ ವಹಿಸಿರಲಿಲ್ಲ. ರಾಗಿಣಿ ಸ್ವತಃ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ರು ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.