ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲು ಮಾಡಿರುವ ಮೈತ್ರಿ ಪಕ್ಷಗಳು, ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಬಿಜೆಪಿ ಗೆಲುವಿಗೆ ಬ್ರೇಕ್ ಹಾಕಲು ಸಿದ್ಧತೆ ನಡೆಸಿವೆ. ಈ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಬೇಕು ಹಾಗೂ ಅದರ ಗೆಲುವಿಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಚರ್ಚೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಉಪಚುನಾವಣೆ ಫಲಿತಾಂಶ ಬಳಿಕ ಫೋನ್ ಮೂಲಕ ರಾಜಕೀಯ ಬೆಳವಣಿಗೆಗಳನ್ನು ಸಿಎಂ ಅವರು, ರಾಹುಲ್ ಗಾಂಧಿಗೆ ವಿವರ ನೀಡಿದ್ದಾರೆ. ಹೆಚ್ಚಿನ ಚರ್ಚೆಗೆ ದೆಹಲಿಗೆ ಬರುವಂತೆ ರಾಹುಲ್ ಗಾಂಧಿ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಮುಂದಿನ ವಾರ ಸಿಎಂ ಕುಮಾರಸ್ವಾಮಿ ದೆಹಲಿಗೆ ತೆರಳಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲಿದ್ದಾರೆ.