ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮೇಲೆ ನಡೆದ ಐಟಿ ದಾಳಿಯ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ವಿಚಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಜರಾತ್ ಕಾಂಗ್ರೆಸ್ ಶಾಸಕರಿಗೆ ಆಶ್ರಯ ನೀಡಿದ ಸಂದರ್ಭದಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮನೆಗಳ ಮೇಲೆ ಐಟಿ ದಾಳಿ ನಡೆದಿತ್ತು. ಸತತ ಮೂರು ದಿನಗಳ ಕಾಲ ನಡೆದ ಐಟಿ ದಾಳಿ ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು.
ರಾಯಚೂರಿನಿಂದ ಬಳ್ಳಾರಿಯವರೆಗೆ ಡಿಕೆಶಿಯೊಂದಿಗೆ ಪ್ರಯಾಣಿಸಿದ ರಾಹುಲ್, ಐಟಿ ದಾಳಿಯ ಬಗ್ಗೆ ಸಂಪೂರ್ಣ ವಿವರಣೆ ಪಡೆದಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಕೇಂದ್ರದಲ್ಲಿರುವ ಪ್ರಧಾನಿ ಮೋದಿ ಸರಕಾರ, ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.