ಹುಬ್ಬಳ್ಳಿ : ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕೇಂದ್ರದ ವೈಫಲ್ಯದಿಂದ ಮೋದಿ ಮತ್ತೆ ಪ್ರಧಾನಿ ಆಗಲ್ಲ ಎಂದಿದ್ದೇನೆ. ಪ್ರಧಾನಿ ಮೋದಿ ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಆದ್ದರಿಂದ ನಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿಯಾದ ರಾಹುಲ್ ಗಾಂಧಿ ದೇಶದ ಮುಂದಿನ ಪ್ರಧಾನಿಯಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಸಿಎಂ ಬೆಗ್ಗರ್ಸ್ ಹೇಳಿಕೆಯ ಬಗ್ಗೆ ಮಾತನಾಡಿದ ಅವರು, ‘ಮೈತ್ರಿ ಸರ್ಕಾರದಲ್ಲಿ ಯಾರು ಬೆಗ್ಗರ್ಸ್ ಅಲ್ಲ’ ಎಂದು ತಿಳಿಸಿದ್ದಾರೆ.
ಹಾಗೇ ದೇವೇಗೌಡರ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ ‘ಮೈಸೂರಿನಲ್ಲಿ ದೇವೇಗೌಡರ ಸ್ಪರ್ಧೆ ವಿಚಾರ ನನಗೆ ಗೊತ್ತಿಲ್ಲ. ಸಮನ್ವಯತೆಯಿಂದ ಕೂತು ಸ್ಥಾನ ಹಂಚಿಕೆ ಮಾಡಿಕೊಳ್ಳುತ್ತೇವೆ’ ಎಂದು ಹೇಳಿದ್ದಾರೆ. ಅಲ್ಲದೇ ರಾಹುಲ್ ಗಾಂಧಿ ಜೊತೆಗೆ ಚರ್ಚಿಸುವುದಾಗಿ ಜೆಡಿಎಸ್ ನಾಯಕರ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಹೆಚ್.ಡಿ.ರೇವಣ್ಣ ಹೇಳಿಕೆಯನ್ನು ಗಮನಿಸಿದ್ದೇನೆ ‘ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.