Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಮೈಸೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಕರ್ನಾಟಕ ಪ್ರವಾಸಕ್ಕೆ ಆಗಮಿಸಿದ್ದು, ಇಂದು ಮೈಸೂರಿಗೆ ಬಂದಿಳಿದಿದ್ದಾರೆ.
ಮೊನ್ನೆಯಷ್ಟೇ ಕರಾವಳಿಯಲ್ಲಿ ಜನಾಶೀರ್ವಾದ ಯಾತ್ರೆ ಪಾಲ್ಗೊಂಡಿದ್ದ ರಾಹುಲ್ ಗಾಂಧಿ ಇಂದು ಸಿಎಂ ಸಿದ್ದರಾಮಯ್ಯನವರ ತವರು ಜಿಲ್ಲೆಗೆ ಆಗಮಿಸಿದ್ದಾರೆ. ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಸ್ವಾಗತ ಕೋರಿದ್ದಾರೆ.
ನಂತರ ನಾಡದೇವತೆ ಚಾಮುಂಡೇಶ್ವರಿ ದೇವತೆ ದರ್ಶನಕ್ಕೆ ತೆರಳಿದ ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್, ಕೆಪಿಸಿಸಿ ಜಿ ಪರಮೇಶ್ವರ್ ಮತ್ತಿತರರು ಸಾಥ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ