ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮುಂದೆ ಪ್ರಧಾನಮಂತ್ರಿ ಆಗುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಡಿಕೇರಿಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ನಾಯಕತ್ವ ಒಪ್ಪಿಕೊಳ್ಳಲು ಯುವಕರು ಮುಂದೆ ಬರುತ್ತಿದ್ದಾರೆ. ದೇಶದ ಹಿತದೃಷ್ಠಿಯಿಂದ ಜನರು ಕಾಂಗ್ರೆಸನ್ನು ಅಧಿಕಾರಕ್ಕೆ ತಂದೆ ತರುತ್ತಾರೆ. ರಾಹುಲ್ ಗಾಂಧಿ ಪ್ರಧಾನಮಂತ್ರಿ ಆಗೇ ಆಗುತ್ತಾರೆ ಎಂದು ತಿಳಿಸಿದ್ದಾರೆ.
ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿಗೆ ಯಾವುದೇ ಸಿದ್ದಾಂತವಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನರ ಭ್ರಮ ನಿರಸನಗೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.