ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲೆ ಭ್ರಷ್ಟಾಚಾರ ನಿಗ್ರಹ ಘಟಕ ಸತತ ಎರಡು ದಿನಗಳ ಕಾಲ ನಡೆಸಿ ದಾಳಿ ಶನಿವಾರ ರಾತ್ರಿ ಅಂತ್ಯಗೊಂಡಿದ್ದು 13 ಅಕ್ರಮಗಳು ಮೇಲ್ನೋಟಕ್ಕೆ ಪತ್ತೆಯಾಗಿವೆ.
ಬಿಡಿಎ ಕಚೇರಿಯಲ್ಲಿ ದಾಖಲೆಗಳನ್ನು ಪರಿಶೀಲಸಿಸಿದ ನಂತರ ಅನುಮಾನ ವ್ಯಕ್ತವಾದ ದಾಖಲೆ ಪತ್ರಗಳನ್ನು ಎಸಿಬಿ ಅಧಿಕಾರಿಗಳು ಕೊಂಡೊಯ್ದಿದ್ದು, ಅವಶ್ಯಕತೆ ಇದ್ದರೆ ಮತ್ತೆ ಮಂಗಳವಾರ ಪರಿಶೀಲನೆ ಮಾಡುವ ಸಾಧ್ಯತೆ ಇದೆ.ಭ್ರಷ್ಟಾಚಾರ ನಿಗ್ರಹದಳ ದಿಂದ ಸುದೀರ್ಘ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಭ್ರಷ್ಟಾಚಾರ ನಿಗ್ರಹದಳದ ದಾಳಿ ವೇಳೆ ಪತ್ತೆಯಾದ ಅಕ್ರಮಗಳು ಈ ಕೆಳಗಿನಂತಿದೆ
1) ಅರ್ಕಾವತಿ ಬಡಾವಣೆ, ಕೆಂಪೇಗೌಡ ಬಡಾವಣೆ, ವಿಶ್ವೇಶ್ವರಯ್ಯ ಬಡಾವಣೆ 75 ಕೋಟಿ ಬೆಲೆ ಬಾಳುವ 6 ನಿವೇಶನಗಳನ್ನ ಸುಳ್ಳು ಮಾಹಿತಿ ನೀಡಿ ನಕಲಿ ದಾಖಲೆ ಸೃಷ್ಠಿಸಿರುವುದು ಪತ್ತೆ
2) ಕೆಂಗೇರಿ ಹೊಬಳಿಯಲ್ಲಿ ಉಲ್ಲಾಳ ಗ್ರಾಮದಲ್ಲಿ 1.5 ಕೋಟಿ ಮೌಲ್ಯದ ಅಕ್ರಮ ನಿವೇಶನಗಳು ಮಂಜೂರು
3) ಸ್ಯಾಟಲೈಟ್ ಟೌನ್ ಬಳಿ 80 ಲಕ್ಷ ಮೌಲ್ಯದ ನಿವೇಶನ ಅಕ್ರಮವಾಗಿ ಮಂಜೂರು
4) ಚಂದ್ರಾಲೇಔಟ್ ನಲ್ಲಿ2400 ಚದರ ಅಡಿಯ 5 ಕೋಟಿ ಮೌಲ್ಯದ ನಿವೇಶನ ಅಕ್ರಮ ಮಂಜೂರು
5) ಕೆಂಪೇಗೌಡ ಲೇಔಟ್ ನಲ್ಲಿ 30 ಲಕ್ಷ ಮೌಲ್ಯದ ಅಕ್ರಮ ನಿವೇಶನ ಮಂಜೂರು
6) ಒಂದು ನಿವೇಶನವನ್ನ ಒಂದಕ್ಕಿಂತ ಹೆಚ್ಚು ವ್ಯಕ್ತಿಗಳಿಗೆ ನೊಂದಣಿ ಈ ಕುರಿತು ತನಿಖೆ
7) ವಿಶ್ವೇಶ್ವರಯ್ಯ ಲೇಔಟ್ ನಲ್ಲಿ 52 ಲಕ್ಷ ಮೌಲ್ಯದ ನಿವೇಶನ ಅಕ್ರಮವಾಗಿ ಮಂಜೂರು
8) ಅರ್ಕಾವತಿ ಲೇಔಟ್ ನಲ್ಲಿ ಪಲಾನುಭವಿಗಳಿಗಲ್ಲದೆ ಬೇರೆಯವರಿಗೆ ನಿವೇಶನ ಮಂಜೂರು
9) ಕೆಂಪೇಗೌಡ ಲೇಔಟ್, ಶಿವರಾಮ ಕಾರಂತ ಲೇಔಟ್, ಮೊದಲಾದ ಕಡೆ ಅಧಿಕಾರಿಗಳು ಮತ್ತು ಮದ್ಯವರ್ತಿಗಳೊಂದಿಗೆ ಅಕ್ರಮವಾಗಿ ಸೈಟ್ ಗಳ ಮಂಜೂರು
10) ಕೋಟ್ಯಾಂತರ ಮೌಲ್ಯದ ಪರಿಹಾರ ಧನ ಸದರಿ ವಯಕ್ತಿಗಳಿಗೆ ನೀಡದೆ ಬೇರೆಯವರಿಗೆ ನೀಡಿರುವುದು ಪತ್ತೆ
11) ಅಂಜನಾಪುರ ಬಡಾವಣೆಯಲ್ಲಿ ಮೂಲ ಮಾಲೀಕನಿಗಲ್ಲದೆ ಬೇರೆಯವರಿಗೆ ನಿವೇಶನ ನೀಡಿರುವ ದಾಖಲೆ ಪತ್ತೆ
12) ಅರ್ಕಾವತಿ ಲೇಔಟ್ ಸೇರಿದಂತೆ ಇತರೆ ಕಡೆ ಅರ್ಜಿದಾರರಿಂದ ಹಣ ಪಡೆದು ನಿವೇಶನ ನೀಡದೆ ತೊಂದರೆ ಕೊಟ್ಟಿರುವ ಅಧಿಕಾರಿಗಳು
13) ಅರ್ಜಿದಾರರಿಗೆ ನಿವೇಶನ ಹಂಚಿಕೆ ಪತ್ರ ನೀಡದೆ ವಿಳಂಭ ಮಾಡಿರುವು ಪತ್ತೆ