ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ನಾಳೆಯಿಂದ 6 ದಿನಗಳ ಕಾಲ ಮಳೆಯಾಗಲಿದ್ದು, ವಿಜಯಪುರದಲ್ಲಿ ಮೂರು ದಿನ ಮಳೆಯಾಗಲಿದೆ. ಹಾಗೆಯೇ ಬೆಳಗಾವಿ, ಕೊಡಗು, ರಾಮನಗರ, ಗದಗ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.