Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಭಾರೀ ಮಳೆಯಿಂದಾಗಿ ಮುಂಬೈನ ಚೆಂಬೂರು ಮತ್ತು ವಿಕ್ರೊಲಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.
ಭಾನುವಾರ ಎರಡು ಪ್ರತ್ಯೇಕ ಗೋಡೆ ಕುಸಿದ ಪ್ರಕರಣಗಳು ನಡೆದಿದ್ದುಮ, ಚೆಂಬೂರ್ ನಲ್ಲಿ 17 ಮಂದಿ ಹಾಗೂ ವಿಕ್ರೋಲಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ.
ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಿಸಿದ್ದಾರೆ.
ಭಾರೀ ಮಳೆಯಿಂದಾಗಿ ರೈಲ್ವೆ ಹಳಿಗಳು ಹಾನಿಯಾಗಿದ್ದು ರೈಲ್ವೆ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. ಅಲ್ಲದೇ ಸಂಚಾರ ಅವ್ಯವಸ್ಥೆಗೊಂಡಿದ್ದು, ಕೇಂದ್ರ ರಕ್ಷಣಾ ಪಡೆ ಸಿಬ್ಬಂದಿ ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.