Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕೊಡಗು ಜಿಲ್ಲೆಯಾದ್ಯಂತ ಮುಂದುವರೆದ ಭಾರಿ ಗಾಳಿ, ಮಳೆ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಸೇರಿದಂತೆ 1ರಿಂದ 10ನೇ ತರಗತಿಗಳಿಗೆ ಇಂದು ಒಂದು ದಿನ ಶಾಲೆಗಳಿಗೆ ರಜೆ ಘೋಷಿಸುವಂತೆ ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ. ಪದವಿ ಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ತರಗತಿಗಳು ಎಂದಿನಂತೆ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರೆದಿದೆ.