Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಅದರಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ಮೈಸೂರು, ಚಾಮರಾಜನಗರ, ಕೋಲಾರ, ರಾಮನಗರ, ಮಂಡ್ಯ, ಚಿಕ್ಮಬಳ್ಳಾಪುರದಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.