Publish Date: Fri, 21 Oct 2022 (16:45 IST)
Updated Date: Fri, 21 Oct 2022 (16:46 IST)
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಹಲವು ಜಿಲ್ಲೆಗಳಿಗೆ ಹಳದಿ ಅಲೆರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಭಾರೀ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ.