Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ತೌಕ್ತೆ ಚಂಡಮಾರುತದ ಅಬ್ಬರದಿಂದಾಗಿ ಕರಾವಳಿ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದು ಇನ್ನೂ ಮೂರು ದಿನ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.
ಇದಲ್ಲದೆ, ಕರಾವಳಿಯಲ್ಲಿ ಮೇ 21 ರವರೆಗೂ ಮಳೆ ಮುಂದುವರಿಯಲಿದೆ. ಇದೀಗ ಮುಂಬೈ, ಮಹಾರಾಷ್ಟ್ರ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದೆ.