Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 2 ದಿನಗಳಿಂದ ಮಳೆಯಾಗುತ್ತಿದೆ. ಇಂದಿನಿಂದ 3 ದಿನ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಬೆಂಗಳೂರು, ಚಿತ್ರದುರ್ಗ, ಹಾಸನ ಹವಮಾನ ಇಲಾಖೆ ಹಳದಿ ಅಲರ್ಟ್ ಘೋಷಿಸಿದೆ. ಮುಂದಿನ 3 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉತ್ತರ ತಮಿಳುನಾಡು ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿಮೀವರೆಗೆ ವಿಸ್ತರಿಸಿದೆ. ಕರ್ನಾಟಕದ ಒಳನಾಡಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ತೇವಾಂಶದ ವಾತಾವರಣವಿರಲಿದೆ. ಹವಾಮಾನ ಇಲಾಖೆಯ ಪ್ರಕಾರ, ಇಂದು ಕರ್ನಾಟಕದ ಒಳನಾಡಿನ ಭಾಗದಲ್ಲಿ ಗುಡುಗು ಮತ್ತು ಮಿಂಚು ಸಹಿತ ವ್ಯಾಪಕವಾದ ಮಳೆಯಾಗುವ ನಿರೀಕ್ಷೆಯಿದೆ.