Publish Date: Sun, 06 Nov 2022 (17:59 IST)
Updated Date: Sun, 06 Nov 2022 (18:02 IST)
ಕರ್ನಾಟಕದ ಬೆಂಗಳೂರು, ಮಲೆನಾಡು, ಕರಾವಳಿ ಸೇರಿದಂತೆ ಹಲವೆಡೆ ಇಂದಿನಿಂದ ನವೆಂಬರ್ 9ರವರೆಗೆ ಭಾರೀ ಮಳೆಯಾಗಲಿದೆ. ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಗುಡುಗು ಸಹಿತ ವ್ಯಾಪಕ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೇ, ಇಂದಿನಿಂದ ರಾಜ್ಯಾದ್ಯಂತ ಚಳಿ ಹೆಚ್ಚಾಗಲಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.