Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕ ಮಾತ್ರವಲ್ಲದೆ ಇಂದು ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಮಳೆಯಾಗಲಿದೆ.ಮೇ 5ರ ನಂತರ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ.