Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬಾಗಲಕೋಟೆ ಜಿಲ್ಲೆಯಲ್ಲಿ ಕಳೆದ ರಾತ್ರಿ ಸುರಿದ ಧಾರಕಾರ ಮಳೆಯಿಂದಾಗಿ ಮನೆಗಳಿಗೆ ನೀರು ನುಗ್ಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಸುಮಾರು ಮೂರು ಗಂಟೆಗಳ ಕಾಲ ಸುರಿದ ಭಾರೀ ಮಳೆಗೆ ಸೀಮಿಕೇರಿ ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ಮನೆಯಲ್ಲಿರುವ ವಸ್ತುಗಳೆಲ್ಲ ನೀರು ಪಾಲಾಗಿದ್ದು, ರಾತ್ರಿ ಇಡೀ ಮಳೆ ನೀರು ಹೊರಹಾಕಲು ಜನರು ಹರಸಾಹಸ ಪಟ್ಟಿದ್ದಾರೆ.