Daily Horoscope
✕

ರಾಜ್ಯದಲ್ಲಿ ಮಳೆಯ ಅಬ್ಬರ

Webdunia
ಗುರುವಾರ, 11 ನವೆಂಬರ್ 2021 (20:25 IST)
ಬಂಗಾಳ ಕೊಲ್ಲಿಯಲ್ಲಿ ಕಂಡುಬರುತ್ತಿರುವ ವಾಯುಭಾರ ಕುಸಿತದಿಂದಾಗಿ ನ.12 ರಿಂದ ಮೂರು ದಿನ ರಾಜ್ಯದ ದಕ್ಷಿಣ ಒಳನಾಡಿನ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಈ ಹಿನ್ನೆಲೆ ಎರಡು ದಿನ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯಕ್ಕೆ ತಮಿಳುನಾಡು ಕರಾವಳಿಯಲ್ಲಿ ಸುಳಿಗಾಳಿ ನಿರ್ಮಾಣವಾಗಿದೆ. ಇದರ ಪ್ರಭಾವದಿಂದ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ  ನ.12 ರಂದು ಕೆಲವೆಡೆ ಭಾರಿ ಮಳೆ ಬೀಳಲಿದೆ ಎಂಬ ಮಾಹಿತಿ ದೊರೆತಿದೆ. ಪ್ರಮುಖವಾಗಿ ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರ, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲೂ ವಾಯುಭಾರ ಕುಸಿತ: ಪೂರ್ವ ಅರಬ್ಬಿ ಸಮುದ್ರದ ಮಧ್ಯದಲ್ಲಿ ಕೂಡ ಸೃಷ್ಟಿಯಾಗಿರುವ ಪ್ರಬಲ ವಾಯುಭಾರ ಕುಸಿತವು ಪಶ್ಚಿಮ ದಿಕ್ಕಿನ ಮಾರ್ಗವಾಗಿ ಹಾದು ರಾಜ್ಯದ ಕರಾವಳಿ ಸಮೀಪಿಸಿದೆ. ಈ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಒಣ ಹವೆ: ಉತ್ತರ ಒಳನಾಡಿನಲ್ಲಿ ಹಿಂಗಾರು ಕ್ಷೀಣಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಉಳಿದೆಡೆ ಒಣಹವೆ ಮುಂದುವರಿಯಲಿದೆ ಎನ್ನುವ ಮಾಹಿತಿ ದೊರೆತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಕರ್ನಾಟಕಕ್ಕೆ ಮಹಿಳಾ ಗವರ್ನರ್: ನೂತನ ರಾಜ್ಯಪಾಲ ಡಾ ಸುಧಾ ಯಾದವ್ ಯಾರು ಗೊತ್ತಾ

ಮುಂದಿನ ಸುದ್ದಿ
Show comments