ಬೆಂಗಳೂರು: ಇಂದು ನಡೆಯುತ್ತಿರುವ ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ನ ರೆಬಲ್ ಶಾಸಕರು ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿದ್ದಾರೆ.
ಈಗಾಗಲೇ ಜೆಡಿಎಸ್ ನಿಂದ ಮಾನಸಿಕವಾಗಿ ಹೊರಬಂದಿರುವ ಜಮೀರ್ ಅಹಮ್ಮದ್, ಚೆಲುವರಾಯಸ್ವಾಮಿ ಸೇರಿದಂತೆ ರೆಬಲ್ ಶಾಸಕರು ಈ ಚುನಾವಣೆ ಬಳಿಕ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ವಿಧಾನಸೌಧದ ಮತಗಟ್ಟೆಗೆ ಬಂದ ರೆಬಲ್ ಶಾಸಕರನ್ನು ಸ್ವತಃ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಬರಮಾಡಿಕೊಂಡು ಸಹಿ ಪಡೆದುಕೊಂಡಿದ್ದಾರೆ. ಮತದಾನಕ್ಕೆ ಮೊದಲು ಕಾಂಗ್ರೆಸ್ ನಾಯಕರೊಂದಿಗೆ ಮಾತುಕತೆ ನಡೆಸಿದ ರೆಬಲ್ ಶಾಸಕರು ಬಳಿಕ ಡಿಕೆ ಶಿವಕುಮಾರ್ ಅವರೊಂದಿಗೆ ತೆರಳಿದ್ದಾರೆ.
ರೆಬಲ್ ಶಾಸಕರು ಕಾಂಗ್ರೆಸ್ ಗೆ ಮತ ಹಾಕಿರುವುದರಿಂದ ಜೆಡಿಎಸ್ ಅಭ್ಯರ್ಥಿಯ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಅತ್ತ ಕಾಂಗ್ರೆಸ್ ಶಾಸಕರಿಗೆ ಎರಡು ಬಾರಿ ಮತದಾನ ಮಾಡಲು ಅವಕಾಶ ಮಾಡಿಕೊಟ್ಟಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್ ಮತದಾನ ಬಹಿಷ್ಕರಿಸಲು ಚಿಂತನ ನಡೆಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ