Publish Date: Sun, 18 Feb 2018 (12:25 IST)
Updated Date: Sun, 18 Feb 2018 (12:26 IST)
ಬೆಂಗಳೂರು: ಬೆಂಗಳೂರಿನಲ್ಲಿ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
‘ತಪ್ಪು ಯಾರೇ ಮಾಡಿದರೂ ತಪ್ಪೇ. ಪೊಲೀಸರು ಇರೋದೇ ಬಂಧಿಸೋಕೆ ಅಲ್ವಾ? ಶಾಸಕರ ಪುತ್ರ ಎನ್ನುವ ಕಾರಣಕ್ಕೆ ಆರೋಪಿಯನ್ನು ಸುಮ್ಮನೇ ಬಿಡುವ ಪ್ರಶ್ನೆಯಿಲ್ಲ. ಆತನನ್ನು ಬಂಧಿಸೋಕೆ ಹೇಳಿದ್ದೇವೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ’ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಈ ನಡುವೆ ಸಿಎಂ ಸಿದ್ದರಾಮಯ್ಯ ಕೂಡಾ ಯಾವುದೇ ಪ್ರಭಾವಕ್ಕೊಳಗಾಗದೇ ಶಾಸಕರ ಪುತ್ರನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ