ಮಾಜಿ ಸಚಿವ ಹಾಗೂ ಶಾಸಕ ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ರಾಮನಗರದಲ್ಲಿ ಪ್ರತಿಭಟನೆಗಳು, ಬಂದ್ ಮುಂದುವರಿದಿರುವಂತೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಂದ್ ಹಿನ್ನಲೆಯಲ್ಲಿ ಸಾರ್ವಜನಿಕರು ಶಾಂತಿಯುತವಾಗಿ ವರ್ತಿಸಬೇಕು. ಎಲ್ಲಿಯೂ ಗಲಾಟೆ ನಡೆಯದಂತೆ ಸೂಕ್ತ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಕೇಂದ್ರ ವಲಯದ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.
ಸೂಕ್ಷ್ಮ ಪ್ರದೇಶವಾದ ಕನಕಪುರದಲ್ಲಿಯೇ ಒಬ್ಬರು ಎಸ್ಪಿ ಇದ್ದಾರೆ. ಪೆಟ್ರೋಲಿಂಗ್ ನಡೆಸಲಾಗುತ್ತಿದೆ. ಹೆಚ್ಚಿನ ಭದ್ರತೆಗೆ ಪೊಲೀಸ್ ಸಿಬ್ಬಂದಿಯನ್ನು ಗಸ್ತಿನ ಮೂಲಕ ನಿಯೋಜಿಸಲಾಗಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲಾಗಿದೆ. ಸಾರ್ವಜನಿಕರು ಯಾವುದೇ ಭಯ ಪಡುವ ಅಗತ್ಯ ಇಲ್ಲ ಎಂದ್ರು. ಬಂದ್ ಹಿನ್ನಲೆಯಲ್ಲಿ ಕೆಎಸ್ಅರ್ಟಿಸಿ ಅವರೇ ಬಸ್ ಸಂಚಾರ ಸ್ಥಗಿತಗೊಳಿಸಿದ್ದಾರೆ. ತುರ್ತು ಸೇವೆಗಳಿಗೆ ಯಾವುದೇ ತೊಂದರೆ ಇಲ್ಲ. ಸಾರ್ವಜನಿಕರು ನಮ್ಮೊಂದಿಗೆ ಸಹಕಾರ ನೀಡಿದರೆ, ಆದಷ್ಟು ಶೀಘ್ರವೇ ಪರಿಸ್ಥಿತಿಯನ್ನು ಹತೋಟಿಗೆ ತರಲಾಗುವುದು ಅಂತ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಇನ್ನು, ರಾಮನಗರ, ಕನಕಪುರ ಹಾಗೂ ಡಿಕೆ ಶಿವಕುಮಾರ್ ಸ್ವಗ್ರಾಮ ದೊಡ್ಡ ಆಲಹಳ್ಳಿಯಲ್ಲಿ ತೀವ್ರಗೊಂಡಿದೆ ಪ್ರತಿಭಟನೆ. ಬೈಕ್ ರ್ಯಾಲಿ, ಟೈಯರ್ ಗೆ ಬೆಂಕಿ ಹಚ್ಚಿ ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.