ಬೆಂಗಳೂರು: ಡಿಕೆ ಶಿವಕುಮಾರ್ ಪುರುಷತ್ವವಿಲ್ಲ, ಆಗಿದ್ದರೆ ಅವರು ನೇರವಾಗಿ ನನ್ನ ಜೊತೆ ಸ್ಪರ್ಧೆ ಮಾಡುತ್ತಿದ್ದರು. ಈ ರೀತಿ ಅಡ್ಡ ದಾರಿ ಹಿಡಿಯುತ್ತಿರಲಿಲ್ಲ! ಹೀಗಂತ ಸಿಡಿ ವಿವಾದಕ್ಕೀಡಾಗಿರುವ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಸಿಡಿ ಯುವತಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದಾಳೆ. ಇದರಲ್ಲಿ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸಿದ್ದಾಳೆ. ಹೀಗಾಗಿ ರಮೇಶ್ ಜಾರಕಿಹೊಳಿ ಡಿಕೆಶಿಯೇ ತನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಅಡ್ಡದಾರಿ ಹಿಡಿದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಡಿಕೆಶಿ ಪುರುಷತ್ವವಿಲ್ಲ. ಒಂದು ವೇಳೆ ಆಗಿದ್ದರೆ ಅವರು ನೇರವಾಗಿ ನನ್ನ ಜೊತೆ ಫೈಟ್ ಮಾಡುತ್ತಿದ್ದರು. ಈ ರೀತಿ ಸಿಡಿ ಸೃಷ್ಟಿಸಿ ಆ ಪ್ರಕರಣದಲ್ಲಿ ನನ್ನನ್ನು ಸಿಲುಕಿಸುತ್ತಿರಲಿಲ್ಲ. ಇದು ಅವರ ಹೇಡಿತನವನ್ನು ತೋರಿಸುತ್ತದೆ ಎಂದು ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.