Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ವಿರುದ್ಧ ಪುರುಷತ್ವದ ಶಬ್ಧ ಬಳಸಿ ನಿಂದಿಸಿದ್ದಕ್ಕೆ ಶಾಸಕ ರಮೇಶ್ ಜಾರಕಿಹೊಳಿ ವಿಷಾಧ ವ್ಯಕ್ತಪಡಿಸಿದ್ದಾರೆ.
ಸಿಡಿ ಯುವತಿ ಡಿಕೆಶಿ ಸಹಾಯ ಪಡೆಯುವುದಾಗಿ ಹೇಳಿದ್ದ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ರಮೇಶ್, ಡಿಕೆಶಿ ಪುರುಷನೇ ಅಲ್ಲ ಎಂದು ಅವಾಚ್ಯವಾಗಿ ಹೇಳಿದ್ದರು. ಈ ಹೇಳಿಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿತ್ತು. ರಮೇಶ್ ಜಾರಕಿಹೊಳಿ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು.
ಇದರ ಬೆನ್ನಲ್ಲೇ ಮತ್ತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ರಮೇಶ್ ಜಾರಕಿಹೊಳಿ ಇಂತಹ ಅವಾಚ್ಯ ಶಬ್ಧ ಬಳಸಬಾರದಿತ್ತು ಎಂದು ವಿಷಾಧ ವ್ಯಕ್ತಪಡಿಸಿದ್ದಾರೆ. ಈ ಕೆಟ್ಟ ಶಬ್ಧವನ್ನು ವಾಪಸ್ ಪಡೆಯುತ್ತೇನೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.