Publish Date: Sat, 12 Oct 2019 (14:27 IST)
Updated Date: Sat, 12 Oct 2019 (14:30 IST)
ಬೆಂಗಳೂರು : ಜಿ.ಪರಮೇಶ್ವರ್ ಅವರ ಪಿ ಎ ರಮೇಶ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳವೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2-3 ದಿನಗಳಿಂದ ವಿಚಾರಣೆಯ ನೆಪದಲ್ಲಿ ಐಟಿ ಅಧಿಕಾರಿಗಳು ರಮೇಶ್ ಕಿರುಕುಳ ನೀಡಿದ್ದಾರೆ. ಈ ಕಿರುಕುಳ ಸಹಿಸದೆ ಅವರು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಇದು ನಿಜವಾದರೆ ಅವರ ಆತ್ಮಹತ್ಯೆಗೆ ಐಟಿ ಅಧಿಕಾರಿಗಳೇ ಹೊಣೆ ಎಂದು ಕಿಡಿಕಾರಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ನಡೆಸುತ್ತಿರುವುದು ತಪ್ಪಲ್ಲ. ಆದರೆ ರಾಜಕೀಯ ದುರುದ್ದೇಶದಿಂದ ಕೇವಲ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸುತ್ತಿರುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ಮಾತ್ರ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವುದಾ? ಬಿಜೆಪಿಯವರು ಯಾರು ಶಿಕ್ಷಣ ಸಂಸ್ಥೆ ನಡೆಸುತ್ತಿಲ್ವಾ? ಎಂದು ಅವರು ಪ್ರಶ್ನಿಸಿದ್ದಾರೆ.