Publish Date: Sat, 12 Feb 2022 (07:24 IST)
Updated Date: Sat, 12 Feb 2022 (08:13 IST)
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಅತ್ಯಾಚಾರ ಪ್ರಕರಣ ಸಂತ್ರಸ್ತೆ ಎಸ್ಐಟಿ ರಚನೆಯನ್ನೇ ಪ್ರಶ್ನಿಸಿ ಈಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾಳೆ.
ಇಂದು ಸಂತ್ರಸ್ತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು ಅರ್ಜಿಯಲ್ಲಿ ಎಸ್ಐಟಿ ರಚನೆ, ತನಿಖೆಯ ವಿಧಾನ ಮತ್ತು ಎಸ್ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ನಡೆದ ತನಿಖೆಯನ್ನು ಯುವತಿ ಪ್ರಶ್ನಿಸಿದ್ದಾಳೆ.
ಎಸ್ಐಟಿ ರಚನೆಯೇ ಸರಿ ಇಲ್ಲ ಸರ್ಕಾರ ಸ್ವಯಂ ಪ್ರೇರಿತವಾಗಿ ರಚನೆ ಮಾಡಿಲ್ಲ, ಎಸ್ಐಟಿ ರಚನೆಯೇ ಸರಿ ಇಲ್ಲವೆಂದಾಗ ಅದರ ವರದಿಯನ್ನು ಕೋರ್ಟಿಗೆ ಸಲ್ಲಿಕೆ ಮಾಡಿ, ವಿಚಾರಣೆ ನಡೆಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾಳೆ.
ಎಸ್ಐಟಿ ವರದಿಯ ಮೇಲೆ ನಮಗೆ ನಂಬಿಕೆ ಇಲ್ಲ, ಇಂತಹ ವರದಿಯನ್ನು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಲು ಹೈಕೋರ್ಟ್ ಸೂಚಿಸಿದೆ. ಇದಕ್ಕೆ ತಡೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾಳೆ.