ಮೈಸೂರು : ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣ ಇದರ ತನಿಖೆ ಎಸ್ ಐಟಿಗೆ ನೀಡಿದ್ದು ತಿಪ್ಪೆ ಸಾರಿಸುವ ಕೆಲಸವಷ್ಟೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆ ನಡೆಸುವಂತೆ ರಮೇಶ್ ಜಾರಕಿಹೊಳಿ ಸರ್ಕಾರಕ್ಕೆ ಮನವಿ ಮಾಡಿದ ಹಿನ್ನಲೆಯಲ್ಲಿ ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ನೀಡಲಾಗಿದೆ.
ಮೈಸೂರಿನಲ್ಲಿ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಎಸ್ ಐಟಿ ತನಿಖೆಯಿಂದ ಯಾವುದೇ ಪ್ರಯೋಜನವಿಲ್ಲ. ಎಸ್ ಐಟಿ ತನಿಖೆಯಿಂದ ಈವರೆಗೆ ಯಾರೂ ಜೈಲಿಗೆ ಹೋಗಿಲ್ಲ. ರಾಜಕಾರಣದಲ್ಲಿ ನೇರವಾಗಿ ಯುದ್ಧ ಮಾಡೋಣ ಎಂದು ಹೇಳಿದ್ದಾರೆ.