ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಎನ್‌ಐಎ ವಿಶೇಷ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಎನ್‌ಐಎ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಸೋಮವಾರ ಶಂಕಿತ ಉಗ್ರರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಮತ್ತು ಮುಸಾವೀರ್ ಹುಸೇನ್‌ಗೆ ಎರಡು ವಾರ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಮೇಶ್ವರಂ ಕೆಫೆ ಬಾಂಬ್ ಪ್ರಕರಣದ ಆರೋಪಿಗಳನ್ನು ಏಪ್ರಿಲ್ 12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು.
ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ ಸೋಮವಾರ ಎನ್‌ಐಎ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.<>