ಬೆಂಗಳೂರು: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಬಗ್ಗೆ ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಹೆಸರಿಡಲು ತೀರ್ಮಾನ ಕೈಗೊಳ್ಳಲಾಯಿತು..
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರು ಈ ವಿಷಯವನ್ನು ತಿಳಿಸಿದರು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ. ಬ್ರ್ಯಾಂಡ್ ಬೆಂಗಳೂರು ಭಾಗವಾಗಿ ಈ ಹೆಸರು ಬದಲಾಯಿಸಲಾಗುವುದು. ಹೆಸರು ಬದಲಾಯಿಸುವ ಬಗ್ಗೆ ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪ್ರಮುಖ ವ್ಯಕ್ತಿಗಳಿಂದ ಒತ್ತಾಯವಿತ್ತು. ಈ ಸಂಬಂಧ ಕೂಡಲೇ ಅಧಿಸೂಚನೆ ಹೊರಡಿಸಲಾಗುವುದು ಎಂದು ಅವರು ಹೇಳಿದರು.
ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಪುನರ್‌ನಾಮಕರಣ ಮಾಡುವುದರಿಂದ ಸ್ಥಳೀಯರಿಗೆ ಬೆಂಗಳೂರು ಬ್ರ್ಯಾಂಡ್‌ನ ಎಲ್ಲ ಪ್ರಯೋಜನಗಳು ಸಿಗಲಿವೆ. ಅಲ್ಲಿನ ಆಸ್ತಿ ಮೌಲ್ಯವೂ ಹೆಚ್ಚಾಗಲಿದೆ ಎಂದು ಪಾಟೀಲ ತಿಳಿಸಿದರು.