Publish Date: Sat, 15 Jun 2019 (10:47 IST)
Updated Date: Sat, 15 Jun 2019 (10:51 IST)
ಮಂಗಳೂರು : ಚುನಾವಣಾ ಪ್ರಚಾರದ ವೇಳೆ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ ರಮಾನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶಿಸಿದೆ.
ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಅಸೈಗೊಳಿ ಬಳಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ರಮಾನಾಥ ರೈ ಮಾತನಾಡುವ ವೇಳೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದರು.ಈ ಹಿನ್ನಲೆಯಲ್ಲಿ ರಾಮನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಚಕ್ರವರ್ತಿ ಸೂಲಿಬೆಲಿ ಕೋರ್ಟ್ ಮೆಟ್ಟಿಲೆರಿದ್ದರು.
ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಮಂಗಳೂರು ಜೆಎಂಎಫ್ ಸಿ ಕೋರ್ಟ್, ರಮಾನಾಥ ರೈ ವಿರುದ್ಧ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಈ ಹಿನ್ನಲೆಯಲ್ಲಿ ಶಾಸಕ ರಮಾನಾಥ ರೈ ವಿರುದ್ಧ ಕೋಣಾಜೆ ಪೊಲೀಸರು ಐಪಿಸಿ ಸೆಕ್ಷನ್ 500, 504 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.