Publish Date: Fri, 28 Jan 2022 (13:22 IST)
Updated Date: Fri, 28 Jan 2022 (14:25 IST)
ಧಾರವಾಡ : 3 ವರ್ಷದ ಮಗು ಮೇಲೆ 30 ವರ್ಷದ ವಿಕೃತ ಕಾಮಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಘಂಟಿಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಾಮುಕನು ಕುಡಿದ ಮತ್ತಿನಲ್ಲಿ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಾಪಿಯು ಮನೆಯ ಸಮೀಪದಲ್ಲೇ ವಾಸವಾಗಿರುವ ಪರಿಚಯದವರ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಮಗುವಿನ ಕಾಲಿಗೆ ಕಚ್ಚಿ ಗಾಯಗೊಳಿಸಿ ವಿಕೃತಿ ಮೆರೆದಿದ್ದಾನೆ. ಈ ಕುರಿತು ಘಂಟಿಕೇರಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.