ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಸರ್ಕಾರಿ ಅಧಿಕಾರಿ 2 ಲಕ್ಷ ರೂ. ಹಣ ಕೊಟ್ಟು ಪ್ರಕರಣ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಕೃಷಿ ಇಲಾಖೆ ಹೆಚ್ಚುವರಿ ಆಯುಕ್ತ,ಗಂಗಪ್ಪ ಎಂಬುವವರ ಮೇಲೆ ಇಂಥದ್ದೊಂದು ಆರೋಪ ಕೇಳಿಬಂದಿದೆ.
2016 ಮೇ 6 ರಂದು ಅಧಿಕಾರ ದುರುಪಯೋಗಪಡಿಸಿಕೊಂಡ ಸರ್ಕಾರಿ ಅಧಿಕಾರಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 42 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನುವುದು ಆರೋಪ. ಘಟನೆ ಬಳಿಕ 2 ಲಕ್ಷ ಕೊಟ್ಟು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದಾನೆ.
ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಧಿಕಾರಿ ಗಂಗಪ್ಪನನ್ನ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಗಂಗಪ್ಪನನ್ನ ಏಪ್ರಿಲ್ 10ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ