Webdunia - Bharat's app for daily news and videos

Install App

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯ ಮನೆ ಕೆಡವಿದ ಸರ್ಕಾರ, ಪ್ರಕರಣಕ್ಕೂ ವ್ಯಕ್ತಿಗೂ ಸಂಬಂಧವಿಲ್ಲ ಎಂದ ಕೋರ್ಟ್‌

Sampriya
ಶನಿವಾರ, 22 ಫೆಬ್ರವರಿ 2025 (15:52 IST)
Photo Courtesy X
ರಾಜ್‌ಗಢ: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿದ್ದ ಆರೋಪಿಯ ಮನೆ ಕೆಡವಿದ ಸರ್ಕಾರ ಇದೀಗ ಆ ಆರೋಪಿಯನ್ನು ಖುಲಾಸೆಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣ ವಿಚಾರಣೆ ನಡೆಸಿದ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಸೆಷನ್ಸ್ ನ್ಯಾಯಾಲಯವು ಫೆಬ್ರವರಿ 14 ರಂದು ಮಾಜಿ ವಾರ್ಡ್ ಕೌನ್ಸಿಲರ್ ಶಫೀಕ್ ಅನ್ಸಾರಿ ವಿರುದ್ಧ ನಾಲ್ಕು ವರ್ಷಗಳ ಹಿಂದೆ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಮಹಿಳೆ ಸುಳ್ಳು ಆರೋಪ ಮಾಡಿದ್ದಾರೆ ಎಂದು ಹೇಳಿ, ಆರೋಪಿಯನ್ನು ಖುಲಾಸೆಗೊಳಿಸಿ ಆದೇಶ ಹೊರಡಿಸಿದೆ.

ವರದಿಗಳ ಪ್ರಕಾರ, ಮಾರ್ಚ್ 2021 ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಅನ್ಸಾರಿ ಅವರನ್ನು ಬಂಧಿಸಲಾಗಿತ್ತು. ಈ ಆರೋಪದ ಹಿನ್ನೆಲೆ ಅವರ ಮನೆಯನ್ನು ಸ್ಥಳೀಯ ಅಧಿಕಾರಿಗಳು ಕೆಡವಿದ್ದರು. ಅವರಿಗೆ ಆಶ್ರಯ ನೀಡಿದ ಆರೋಪದ ಮೇಲೆ ಅವರ ಮಗ ಮತ್ತು ಸಹೋದರನ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಅನ್ಸಾರಿಯನ್ನು ಖುಲಾಸೆಗೊಳಿಸಿದ ರಾಜ್‌ಗಢ ಜಿಲ್ಲೆಯ ಮೊದಲ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಿತ್ರೇಂದ್ರ ಸಿಂಗ್ ಸೋಲಂಕಿ, ದೂರುದಾರರ ಸಾಕ್ಷ್ಯಗಳಲ್ಲಿ ಗಮನಾರ್ಹ ವ್ಯತ್ಯಾಸಗಳಿವೆ. ಆರೋಪಿ ಶಫೀಕ್ ಅನ್ಸಾರಿ ಮನೆಯಲ್ಲಿ ಸಂತ್ರಸ್ತೆಯ ಉಪಸ್ಥಿತಿಯು ಅನುಮಾನಾಸ್ಪದವಾಗಿದೆ ಎಂದು ಒತ್ತಿ ಹೇಳಿದ್ದಾರೆ.

ವೈದ್ಯಕೀಯ ವರದಿಯಲ್ಲೂ ಆರೋಪಿಯೂ ಸಂತ್ರಸ್ತೆಯೊಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದಕ್ಕೆ ಯಾವುದು ಪುರಾವೆ ದಾಖಲಾಗಿಲ್ಲ ಎಂದಿದ್ದಾರೆ.

ತನ್ನ ಮನೆಯನ್ನು ಕೆಡವಿದಕ್ಕೆ ಸೇಡು ತೀರಿಸಿಕೊಳ್ಳಲು ಅನ್ಸಾರಿ ವಿರುದ್ಧ ಮಹಿಳೆ ಸುಳ್ಳು ಆರೋಪಗಳನ್ನು ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.

ಅನ್ಸಾರಿ, ಸಂತ್ರಸ್ತ ನರೆಯ ಮಹಿಳೆ ಅಕ್ರಮ ಮಾದಕವಸ್ತು ವ್ಯಾಪಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ನಂತರ ಪುರಸಭೆ ಅಧಿಕಾರಿಗಳು ಆ ಮಹಿಳೆಯ ಮನೆಯನ್ನು ಕೆಡವಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ