Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಲಬುರಗಿ : ಮೊಬೈಲ್ನಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿ ಪ್ರಚೋದನೆಗೊಂಡ ಅಪ್ರಾಪ್ತನೊಬ್ಬ 14 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಶಾಕಿಂಗ್ ಘಟನೆ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಅಫಜಲಪುರ ತಾಲೂಕಿನ ಬಾಲಕಿ ಆಳಂದ ತಾಲೂಕಿನ ಗ್ರಾಮದಲ್ಲಿರುವ ಅತ್ತೆ ಮನೆಯಿಂದ ಶಾಲೆಗೆ ಹೋಗುತ್ತಿದ್ದಳು. ಮಂಗಳವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಹಿರ್ದೆಸೆಗೆ ಎಂದು ಹೊರ ಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಬಂದಿರಲಿಲ್ಲ.
ಗಾಬರಿಗೊಂಡ ಬಾಲಕಿ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೈಮೇಲೆ ಎಳೆದಾಡಿ ತರಚಿದ ಗಾಯಗಳಾಗಿದ್ದು ವೇಲ್ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ.