Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಅಪ್ರಾಪ್ತ ಬಾಲಕಿಯ ಮೇಲೆ ರೇಪ್: ಆರೋಪಿಗೆ 7 ವರ್ಷ ಜೈಲು

ಅಪ್ರಾಪ್ತ ಬಾಲಕಿಯ ಮೇಲೆ ರೇಪ್: ಆರೋಪಿಗೆ 7 ವರ್ಷ ಜೈಲು
ಕೋಲಾರ , ಮಂಗಳವಾರ, 1 ಆಗಸ್ಟ್ 2017 (19:08 IST)
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಆರೋಪಿಗೆ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
 
ಕೋಲಾರದ ಎರಡನೇ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಮೂರ್ತಿ ಡಿ.ಎಸ್.ರೇಖಾ, ಆರೋಪಿ ಸುಬ್ರಮಣಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು 5 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.
 
ಆರೋಪಿ ಸುಬ್ರಮಣಿ ಬಾಲಕಿಯನ್ನು  ಬೆಂಗಳೂರಿನ ಥಣಿಸಂದ್ರಕ್ಕೆ ಕರೆದುಕೊಂಡು ಹೋಗಿ ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರವೆಸಗಿದ್ದನು.
 
ಕೋಲಾರ ಜಿಲ್ಲೆ ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯ ವಿರುದ್ಧ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯವನ್ನು ಲೂಟಿ ಮಾಡಿರುವುದೇ ಕಾಂಗ್ರೆಸ್ ಪಕ್ಷದ ಸಾಧನೆ: ಕುಮಾರಸ್ವಾಮಿ