ಹೊಸ ಪಡಿತರ ಚೀಟಿಗಳನ್ನು ವಿತರಿಸಿದಷ್ಟೇ ಪ್ರಮಾಣದಲ್ಲಿ ಹಳೆಯ ಪಡಿತರ ಚೀಟಿಗಳನ್ನು ರದ್ದುಪಡಿಸಬೇಕು. ಒಟ್ಟಾರೆ ಈಗಿರುವ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಿಸುವಂತಿಲ್ಲ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶವು ಅಧಿಕಾರಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ರಾಜ್ಯದಲ್ಲಿ 10.88 ಲಕ್ಷ ಅಂತ್ಯೋದಯ ಮತ್ತು 1.16 ಕೋಟಿ ಬಿಪಿಎಲ್ ಕಾರ್ಡ್‌ದಾರರು ಇದ್ದಾರೆ. 'ಹೊಸ ಬಿಪಿಎಲ್ ಪಡಿತರ ಚೀಟಿಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ' ಎಂದು ಸಚಿವ ಕೆ.ಎಚ್. ಮುನಿಯಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ಇಲಾಖೆಯ ಆದೇಶ ಹೊರಬಂದಿದೆ. ಒಟ್ಟು 2.95 ಲಕ್ಷ ಪೈಕಿ 2.78 ಲಕ್ಷ ಅರ್ಜಿಗಳ ಸ್ಥಳ ಪರಿಶೀಲನೆ ನಡೆದಿದೆ. 2.28 ಲಕ್ಷ ಅರ್ಜಿಗಳು ಅರ್ಹವೆಂದು ಕಂಡು ಬಂದಿವೆ. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು 27, 18 ಅರ್ಜಿ ಸಲ್ಲಿಕೆಯಾಗಿವೆ.