ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾವಣ ರಾಜ್ಯದ ಆಡಳಿತ ನಡೆಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತಕುಮಾರ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಹುಣಸೂರಿನಲ್ಲಿ ಹನುಮ ಜಯಂತಿ ಆಚರಣೆಗೆ ಅನುಮತಿ ನೀಡದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಹಾಗೂ ಈದ್ ಮಿಲಾದ್ ಆಚರಣೆಗೆ ಅನುಮತಿ ನೀಡಿದೆ ಎಂದು ಆರೋಪಿಸಿದರು.
ಪುರಾಣದಲ್ಲಿ ಹನುಮನ ನಾಡೆಂದು ಕರೆಸಿಕೊಂಡಿರುವ ಕರ್ನಾಟಕದಲ್ಲಿ ಹನುಮ ಜಯಂತಿ ಏಕೆ ಆಚರಣೆ ಮಾಡಬಾರದು ಎಂದು ಪ್ರಶ್ನೆ ಮಾಡಿದ ಅವರು, ಕೋಮು ಸೌಹಾರ್ದತೆಗೆ ಧಕ್ಕೆಯಾದರೆ ಮುಖ್ಯಮಂತ್ರಿ ನೇರ ಹೊಣೆಯಾಗುತ್ತಾರೆ ಎಂದರು.
ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವ ಕೆಲಸ ಮಾಡುತ್ತಿದೆ. 19ಜನ ಹಿಂದೂ ಯುವಕರ ಕೊಲೆಯಾದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ. ಕರ್ನಾಟಕದಲ್ಲಿ ಹನುಮ ಜಯಂತಿ ಆಚರಣೆಗೆ ತೊಂದರೆಯಾಗಿರುವುದು ವಿಷಾದನೀಯ ಎಂದರು
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.