ರಾಜ್ಯದ ಉಪಚುನಾವಣೆಯಲ್ಲಿ ಡಿಸಿಎಂ ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿರೋದು ಸ್ವತಃ ಸಿಎಂ ಯಡಿಯೂರಪ್ಪರ ನಿದ್ದೆಗೆಡಿಸಿದೆ.
ಅಥಣಿ – ಕಾಗವಾಡ ಕ್ಷೇತ್ರಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯದ ಬಿಸಿ ಜೋರಾಗಿಯೇ ತಾಗಿದೆ.
ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ರಣರಂಗವಾಗಿ ಮಾರ್ಪಟ್ಟಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಬಂಡಾಯ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ರಾಷ್ಟ್ರೀಯ ಪಕ್ಷಗಳಿಗೆ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ.
ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಎಸ್. ಕೆ. ಬುಟಾಳಿ, ಮಾಜಿ ಶಾಸಕ ಶಹಜಹಾನ್ ಡೋಂಗರಗಾಂವ ಮತ್ತು ಸುರೇಶಗೌಡ ಪಾಟೀಲ ಸೇರಿದಂತೆ ಹಲವರು ತಮ್ಮ ಉಮೇದುವಾರಿಕೆ ಸಲ್ಲಿಸಿ ಕಣದಲ್ಲಿದ್ದಾರೆ.
ಕಳೆದ ಬಾರಿ ಮಹೇಶ ಕುಮಠಳ್ಳಿ ಅವರನ್ನು ಪಂಚಮಸಾಲಿ ಸಮುದಾಯದ ಅತಿಹೆಚ್ಚು ಮತಗಳ ಮೂಲಕ ಗೆಲ್ಲಿಸುವಲ್ಲಿ ಯಶಸ್ವಿ ಆಗಿದ್ದ ಸುರೇಶಗೌಡ ಪಾಟೀಲ, ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದಾರೆ.