ಶಾಸಕ ಮಾಲೀಕಯ್ಯ ಗುತ್ತೇದಾರ್ ಅಮಿತ್ ಶಾರವರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು ಸುದ್ದಿ - ರಿತೇಶ್ ಗುತ್ತೇದಾರ್

Webdunia
ಶನಿವಾರ, 31 ಮಾರ್ಚ್ 2018 (11:36 IST)
ಕಲಬುರಗಿ : ‘ಕಾಂಗ್ರೆಸ್ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಆದರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಸಮ್ಮುಖದಲ್ಲಿ ಬಿಜೆಪಿ ಸೇರುತ್ತಾರೆ ಎಂಬುದು ಸುಳ್ಳು ಸುದ್ದಿ ಎಂದು ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್ ಅವರ ಪುತ್ರ ಫರ್ಹತಾಬಾದ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಿತೇಶ್ ಗುತ್ತೇದಾರ್ ಅವರು ಹೇಳಿದ್ದಾರೆ.

ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡದ ರೀತೇಶ್ ಅವರು,  ಕಾಂಗ್ರೆಸ್‌ ಪಕ್ಷದಲ್ಲಿ ನಮ್ಮ ತಂದೆಯವರಿಗೆ ಅನ್ಯಾಯವಾಗಿದ್ದು ನಿಜ. ರಾಜ್ಯ ಕಾಂಗ್ರೆಸ್‌ನಲ್ಲಿ ಹಿರಿಯ ಶಾಸಕರಾಗಿದ್ದರೂ ಅವರ ಗೌರವಕ್ಕೆ ತಕ್ಕುದಾದ ಸ್ಥಾನಮಾನ ನೀಡುವಲ್ಲಿ ನಾಯಕರು ವಿಫಲವಾಗಿದ್ದಾರೆ.

ಹೀಗಾಗಿ ಪಕ್ಷ ತೊರೆಯುವುದಾಗಿ ತಂದೆ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಜೊತೆಗೂ ಚರ್ಚೆ ಮಾಡಿದ್ದಾರೆ. ಆದರೆ ಮೈಸೂರಿನಲ್ಲಿ ನಡೆಯುವ ಅಮಿತ್‌ ಶಾ ಸಮ್ಮುಖದಲ್ಲಿ ಅವರು ಬಿಜೆಪಿ ಸೇರ್ಪಡೆಗೊಳ್ಳುತ್ತಾರೆ ಎನ್ನುವುದು ಸುಳ್ಳು’ ಎಂದು ಹೇಳಿದ್ದಾರೆ.

ಹಾಗೇ ಮಾಲೀಕಯ್ಯ ಗುತ್ತೇದಾರ್‌ ಅವರು ಶನಿವಾರ ಅಫಜಲ್ಪುರ ತಾಲೂಕಿನ ಸ್ಟೇಷನ್‌ ಗಾಣಗಾಪುರದಲ್ಲಿ ಕಾರ್ಯಕರ್ತರ ಸಭೆ ಕರೆದಿದ್ದು, ಆ ಬಳಿಕ ಮುಂದಿನ ರಾಜಕೀಯ ನಡೆ ಏನೆಂಬುದನ್ನು ತಿಳಿಸಲಿದ್ದಾರೆ ಎಂದು ರಿತೇಶ್ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮ ಖಂಡಿತಾ: ಆರ್‌ ಅಶೋಕ್

ಮುಂದಿನ ಸುದ್ದಿ
Show comments