Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಧರಣಿ ಹಿಂಪಡೆದ ಕಬ್ಬು ಬೆಳೆಗಾರರು: ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದೇನು ಗೊತ್ತಾ?

ಧರಣಿ ಹಿಂಪಡೆದ ಕಬ್ಬು ಬೆಳೆಗಾರರು: ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದೇನು ಗೊತ್ತಾ?
ಬೆಳಗಾವಿ , ಶುಕ್ರವಾರ, 23 ನವೆಂಬರ್ 2018 (16:34 IST)
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದ ರೈತರ ಧರಣಿ ಹಿಂಪಡೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ ಪ್ರತಿಭಟನೆ ನಿರತರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಬ್ಬಿನ ಬಾಕಿ ಸೇರಿದಂತೆ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ  ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಮನವೊಲಿಸಿ ಧರಣಿ ಹಿಂಪಡೆಯುವಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಯಶಸ್ವಿಯಾಗಿದ್ದಾರೆ.

 ಹಲವು ರೈತ ನಾಯಕರಿಗೆ ಎಳನೀರು ಕುಡಿಸಿ, ಧರಣಿಗೆ ತೆರೆ ಎಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಿ.ಕೆ. ಶಿವಕುಮಾರ್, ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಹೊಣೆ. ಆದಷ್ಟು ಬೇಗ ಸಮಸ್ಯೆಗಳನ್ನು ಈಡೇರಿಸಲಾಗುವುದು. ಶೀಘ್ರವೇ ಸಂಬಂಧ ನ್ಯಾಯ ದೊರಕಿಸಿಕೊಡಲಾಗುವುದು. ಹೀಗಾಗಿ ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಸಭೆಯಲ್ಲಿ ಶೀಘ್ರವೇ ಬರಬೇಕಾಗಿರುವ ಬಾಕಿ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ. ನಾನೂ ಕೂಡ ನಿಟ್ಟಿನಲ್ಲಿ ಪ್ರಯತ್ನ ನಡೆಸುತ್ತೇನೆ. ಧರಣಿಯನ್ನು ಹಿಂಪಡೆಯಿರಿ ಎಂದು ಮಾಡಿದ ಮನವಿಗೆ ರೈತರಿಂದ ಸ್ಪಂದನೆ ದೊರೆಯಿತು.
 

 

Share this Story:

Follow Webdunia kannada

ಮುಂದಿನ ಸುದ್ದಿ

ಮೋಜು ಮಸ್ತಿಗಾಗಿ ಅಪಹರಣ, ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಬಂಧನ