ವಿವಾಹ ಮಾಡಿಕೊಡಲು ನಿರಾಕರಿಸಿದ್ದರಿಂದ ಆಕ್ರೋಶಗೊಂಡ ಯುವಕನೊಬ್ಬ ಯುವತಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
ಎರಡು ಮಕ್ಕಳ ತಂದೆಯಾದ ಆರೋಪಿ, ಮನೆಯ ಎದುರು ಮನೆಯಲ್ಲಿದ್ದ ಯುವತಿಯ ಮೇಲೆ ಕಣ್ಣುಹಾಕಿದ್ದ ಎನ್ನಲಾಗಿದೆ. ಯುವತಿಯನ್ನು ವಿವಾಹ ಮಾಡಿಕೊಡುವಂತೆ ಆಕೆಯ ಪೋಷಕರಿಗೆ ದುಂಬಾಲು ಬಿದ್ದಿದ್ದಾನೆ. ಆದರೆ. ಯುವತಿಯ ಪೋಷಕರು ಖಡಾಖಂಡಿತವಾಗಿ ನಿರಾಕರಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆಗಸ್ಟ್ 24 ರಂದು 21 ವರ್ಷದ ಯುವತಿಯನ್ನು ಅಪಹರಿಸಿ ಆಕೆಯ ವಿರೋಧದ ನಡುವೆ ಬಲವಂತವಾಗಿ ತಾಳಿ ಕಟ್ಟಿ ಅತ್ಯಾಚಾರವೆಸಗಿದ್ದಾನೆ. ಮಗಳು ಮನೆಗೆ ಬಾರದಿದ್ದರಿಂದ ಅನುಮಾನಗೊಂಡ ಪೋಷಕರು ಆರೋಪಿಯ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಯ ವಿರುದ್ಧ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ, ಅಪಹರಣ ಕೇಸ್ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.