ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶವನ್ನು ಮುಂದುವರಿಸುವಂತೆ ರಾಜ್ಯ ಸರಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ಕಾವೇರಿ ನ್ಯಾಯಾಧೀಕರಣ ನೀಡಿದ್ದ ಐ ತೀರ್ಪು ಹಾಗೂ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ವಿಶೇಷ ಮೇಲ್ಮನವಿ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಿತು.
ಮೇಲ್ಮನವಿ ಅರ್ಜಿ ಇತ್ಯರ್ಥವಾಗುವವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿ ಸದಸ್ಯ ಪೀಠ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.
ಮಂದಿನ ವಿಚಾರಣೆ ಫೆ-7ರಂದು ನಡೆಯಲಿದೆ. ಅಲ್ಲಿಯವರೆಗೂ ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು, ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ನ್ಯಾಯಾಲಯ ಆದೇಶ ನೀಡಿದೆ.
ಕಾವೇರಿ ನೀರಿನಲ್ಲಿ ಬಳಸಲು ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕ 270 ಟಿಎಂಸಿ, ತಮಿಳುನಾಡು 419, ಕೇರಳ 30 ಹಾಗೂ ಪಾಂಡಿಚೇರಿ 7 ಟಿಎಂಸಿ ನೀರಿಗೆ ಅರ್ಹ ಎಂದು ಕೋರ್ಟ್ ತೀರ್ಪಿನಲ್ಲಿ ತಿಳಿಸಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.