ಇಂದಿನಿಂದ ರಾಜ್ಯಾದ್ಯಂತ ಎಲ್‌ಕೆಜಿ-ಯುಕೆಜಿ ತರಗತಿಗಳ ಜೊತೆಗೆ ಅಂಗನವಾಡಿ ಕೇಂದ್ರಗಳು ಪ್ರಾರಂಭವಾಗಿದೆ.
ಕಳೆದ ಎರಡು ವರ್ಷಗಳಿಂದ ಕೊರೊನಾ ಆತಂಕದ ಹಿನ್ನೆಲೆ ತರಗತಿಗಳನ್ನು ಮುಚ್ಚಲಾಯಿತು. ಇದೀಗ ಕೊರೊನಾ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಇಂದಿನ ಪೂರ್ವ ಪ್ರಾಥಮಿಕ ತರಗತಿಗಳಿಗೆ ಸರ್ಕಾರ ಅನುಮತಿ ನೀಡಿದೆ.
ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಎಲ್‍ಕೆಜಿ-ಯುಕೆಜಿ ಅಂಗನವಾಡಿ ಪ್ರಾರಂಭಿಸಲು ಸಂಪೂರ್ಣ ಸಿದ್ದಗೊಳಿಸಿದೆ. ಕೊರೊನಾ ನಿಯಮಗಳ ಅಡಿ ತರಗತಿಗಳನ್ನು ನಡೆಸಲು ಸರ್ಕಾರ ಆದೇಶ ನೀಡಿದೆ. ಪೂರ್ವ ಪ್ರಾಥಮಿಕ ತರಗತಿಗಳು ತೆರೆಯುವುದಕ್ಕೆ ಶಿಕ್ಷಣ ಇಲಾಖೆ ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಕಡ್ಡಾಯವಾಗಿ ಕೊರೊನಾ ನಿಯಮ ಪಾಲಿಸುವಂತೆ ಆದೇಶ ಹೊರಡಿಸಿದೆ.
ಎಲ್‍ಕೆಜಿ-ಯುಕೆಜಿ ಪ್ರಾರಂಭಕ್ಕೆ ಮಾರ್ಗಸೂಚಿಗಳು:
* ಶಾಲೆಗೆ ಆಗಮಿಸೋ ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು.
* ನಿತ್ಯ ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು.
* ಸೋಮವಾರದಿಂದ ಶುಕ್ರವಾರದ ಒಳಗೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ವರೆಗೆ ತರಗತಿ ನಡೆಸಬೇಕು.
* 2% ಒಳಗೆ ಕೊರೊನಾ ಕೇಸ್ ಇರುವ ತಾಲೂಕುಗಳಲ್ಲಿ ಮಾತ್ರ ತರಗತಿ ಪ್ರಾರಂಭ ಮಾಡಬೇಕು.
* ವಿದ್ಯಾರ್ಥಿಗಳಿಗೆ ನಿತ್ಯ ಥರ್ಮಲ್ ಸ್ಕ್ಯಾನಿಂಗ್ ಮಾಡಬೇಕು.
* ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು.
* ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು.
* ನಿತ್ಯ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
* ಮನೆಯಿಂದಲೇ ಮಕ್ಕಳು ಉಪಹಾರ ಮತ್ತು ಕುಡಿಯುವ ನೀರು ತರಲು ಅವಕಾಶ ಕೊಡಬೇಕು.
* ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
* ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಆರೋಗ್ಯ ಸಮಸ್ಯೆ ಇದ್ದರೆ ಅವರಿಗೆ ಬರಲು ಅವಕಾಶ ನೀಡಬಾರದು.
* ಶಾಲಾ ಆವರಣ ಮತ್ತು ಶಾಲೆಯ ಒಳಗೆ ವಿದ್ಯಾರ್ಥಿಗಳು ಕೂರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು.
* ವಿದ್ಯಾರ್ಥಿಯ ಆರೋಗ್ಯದ ಮೇಲೆ ನಿತ್ಯ ಶಾಲೆಯವರು ನಿಗಾ ಇಡಬೇಕು.
* ವಿದ್ಯಾರ್ಥಿಗೆ ಸೋಂಕು ಬಂದ ಕೂಡಲೇ ಶಾಲೆ ಕ್ಲೋಸ್ ಮಾಡಿ ಎಲ್ಲಾ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಬೇಕು.
* ಸಂದರ್ಶಕರು ಅಥವಾ ಮೂರನೇ ವ್ಯಕ್ತಿಗಳಿಗೆ ಶಾಲೆಗೆ ಪ್ರವೇಶ ನೀಡಬಾರದು.
* ಸೋಂಕು ಕಂಡು ಬಂದ ಶಾಲೆಯನ್ನು ಕ್ಲೋಸ್ ಮಾಡಿ ನಂತರ ಸ್ಥಳೀಯ ಆರೋಗ್ಯ ಅಧಿಕಾರಿಗಳ ಸೂಚನೆ ಕೊಠಡಿ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಪ್ರಾರಂಭ.