ಹಿಂದಿನ ವರ್ಷಗಳಲ್ಲಿ ಅತಿವೃಷ್ಟಿಯಿಂದ ನದಿ ತಟದಲ್ಲಿರುವ 10-15 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತಿತ್ತು. ಆದರೆ ಈ ಬಾರಿ ಅತಿವೃಷ್ಟಿಯಿಂದ ರಾಜ್ಯಾದ್ಯಂತ ನಷ್ಟ ಸಂಭವಿಸಿದೆ.
ಚಿಕ್ಕಬಳ್ಳಾಪುರ, ಕೋಲಾರಗಳಂತಹ ಅತ್ಯಂತ ಬರ ಪೀಡಿತ ಜಿಲ್ಲೆಗಳಲ್ಲೂ ಕೆರೆ-ಕಟ್ಟೆ ತುಂಬಿ ಒಡೆದಿದೆ. ಬೆಳೆದು ನಿಂತ ಪೈರಿಗೆ ಹಾನಿಯಾಗಿ, ಬೆಳೆ ಕೈಗೆ ಸಿಗುವ ಕಾಲದಲ್ಲಿ ರೈತರಿಗೆ ನಷ್ಟವಾಗಿದೆ. ರೈತರ ಕಷ್ಟಕ್ಕೆ ಸ್ಪಂದಿಸಿದ ಸರ್ಕಾರ ಅಧಿಕಾರಿಗಳಿಗೆ ಕೂಡಲೇ ಜಂಟಿ ಸಮೀಕ್ಷೆ ಕೈಗೊಂಡು ವರದಿಯನ್ನು ಪರಿಹಾರ ಚಿಠಿಠಿನಲ್ಲಿ ಅಪ್ಲೋಡ್ ಮಾಡುವಂತೆ ಹಾಗೂ ಮಾಹಿತಿ ಅಪ್ಲೋಡ್ ಆದ 48 ಗಂಟೆಗಳೊಳಗೆ ಪರಿಹಾರ ವಿತರಿಸುವಂತೆ ಸೂಚನೆ ನೀಡಲಾಯಿತು.
ಅದರಂತೆ ಕರ್ನಾಟಕದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜಂಟಿ ಸಮೀಕ್ಷೆ ವರದಿ ಅಪ್ಲೋಡ್ ಆದ 48 ಗಂಟೆಯೊಳಗೆ ನಮ್ಮ ಸರ್ಕಾರ ಪರಿಹಾರ ವಿತರಿಸಿದೆ. ಈವರೆಗೆ 10 ಲಕ್ಷಕ್ಕೂ ಹೆಚ್ಚು ರೈತರಿಗೆ 969 ಕೋಟಿ ರೂ. ತಲುಪಿರುವುದು ಒಂದು ದಾಖಲೆ ಎಂದು ಸಿಎಂ ತಿಳಿಸಿದರು. ಅತಿವೃಷ್ಟಿಯಿಂದ 12.69 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಸಂಭವಿಸಿದ ಬೆಳೆ ಹಾನಿಗೆ ಪರಿಹಾರ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.