ದೇಶದಲ್ಲಿ ಧಾರ್ಮಿಕ ಭಾವನೆ ಹೆಚ್ಚಾಗುತ್ತಿದ್ದು, ಬಾಹುಬಲಿಯ ಮಹಾಮಸ್ತಕಾಭಿಷೇಕದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಹಾಸನ ಜಿಲ್ಲೆಯ ಶ್ರವಣಬೆಳಗೊಳದ ಬಾಹುಬಲಿಯ ಮಹಾ ಮಸ್ತಕಾಭಿಷೇಕದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹನ್ನೆರಡು ವರ್ಷಗಳಲ್ಲಿ ಒಮ್ಮೆ ಮಹಾಪರ್ವ ಆಗುತ್ತದೆ. ಇಂತಹ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಯಾಗಿ ಈ ಸೇವೆ ಸಲ್ಲಿಸಲು ನನಗೆ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ, ಸೌಭಾಗ್ಯ ಎಂದಿದ್ದಾರೆ.
ಪವಿತ್ರ ಸಂದರ್ಭದಲ್ಲಿ ನಿಮ್ಮ ಆಶೀರ್ವಾದ ಪಡೆಯುವ ಅವಕಾಶ ಸಿಕ್ಕಿದೆ. ದೇಶದಲ್ಲಿ ಧಾರ್ಮಿಕ ಪ್ರವೃತ್ತಿ ಹೆಚ್ಚುತ್ತಿದೆ, ಸಾಮಾಜಿಕ ಪ್ರವೃತ್ತಿ ಕ್ಷೀಣಿಸುತ್ತಿದೆ ಎಂದು ತಿಳಿಸಿದ್ದಾರೆ.
ಮೂರನೇ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶ್ರವಣಬೆಳಗೊಳಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಮೀಜಿ, ಸಚಿವರು ಸ್ವಾಗತ ಕೋರಿದರು. ಇದೇ ಸಂದರ್ಭದಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಮೋದಿ ಅವರನ್ನು ಸನ್ಮಾನಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.