ರೇಣುಕಾಚಾರ್ಯ ಸೋದರನ​​​​ ಪುತ್ರ ನಾಪತ್ತೆ..!

Webdunia
ಬುಧವಾರ, 2 ನವೆಂಬರ್ 2022 (16:24 IST)
ಹೊನ್ನಾಳಿ ಶಾಸಕ ರೇಣುಕಾಚಾರ್ಯ ಸಹೋದರ ರಮೇಶ್‌ ಪುತ್ರ ನಾಪತ್ತೆ, ನಾಪತ್ತೆಯಾಗಿ 2 ದಿನವಾದ್ರೂ ಚಂದ್ರಶೇಖರ್‌ ಬಗ್ಗೆ ಸುಳಿವು ಸಿಕ್ಕಿಲ್ಲ. ಚಂದ್ರಶೇಖರ್ ನಾಪತ್ತೆಯಿಂದ ಕುಟುಂಬಸ್ಥರು ಕಂಗಾಲಾಗಿದ್ದಾರೆ, ಅಣ್ಣನ ಮಗ ನಾಪತ್ತೆಯಾದ ಶಾಸಕ ರೇಣುಕಾಚಾರ್ಯ ಕಣ್ಣೀರು ಹಾಕಿದ್ದಾರೆ. ಚಂದ್ರಶೇಖರ್ ನ ಮೊಬೈಲ್ ಸ್ವಿಚ್ ಆಫ್ ಆಗಿ 48 ಗಂಟೆ ಕಳೆದಿದೆ. ಆದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಸೇರಿ ಹಲವೆಡೆ ತೀವ್ರ ಹುಡುಕಾಟ ನಡೆಸುತ್ತಿದೆ. ಪ್ರಕರಣ ಗಂಭೀರವಾಗ್ತಿದ್ದಂತೆ ದಾವಣಗೆರೆ ಎಸ್ಪಿ ರಿಷ್ಯಂತ್ ಹೊನ್ನಾಳಿ ರೇಣುಕಾಚಾರ್ಯ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮಾತನಾಡಿದ ಅವರು, ಚಂದ್ರಶೇಖರ್ ನಾಪತ್ತೆ ಬಗ್ಗೆ ತನಿಖೆ ನಡೆಯುತ್ತಿದೆ. ಶಿವಮೊಗ್ಗದಿಂದ ನ್ಯಾಮತಿ ಕಡೆ ಬಂದಿರುವ ಬಗ್ಗೆ ಮಾಹಿತಿ ಇದೆ. ಏನಾಗುತ್ತಿದೆ ಎಂಬುದರ ಬಗ್ಗೆ ಸದ್ಯಕ್ಕೆ ಹೇಳೋದಕ್ಕೆ ಆಗಲ್ಲ, ಈ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ರು. ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಚಂದ್ರಶೇಖರ್ ಅವರಿಗೆ ಭಾವುಕ ಸಂದೇಶ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಏರ್‌ಪೋರ್ಟ್ ನಿರ್ಮಾಣದ ಬಗ್ಗೆ ಸಚಿವ ಎಂಬಿ ಪಾಟೀಲ್ ಹೀಗಂದ್ರು

ಇರಾನ್‌ಗೆ ಮತ್ತೇ ಬೆಚ್ಚಿಬೀಳಿಸುವ ಎಚ್ಚರಿಕೆ ಕೊಟ್ಟ ಇಸ್ರೇಲ್ ಪಿಎಂ ನೆತನ್ಯಾಹು

ವಾಣಿಜ್ಯ ಬಳಕೆಯ ಸಿಲಿಂಡರ್ ಪೂರೈಕೆ ಸ್ಥಗಿತ: ಕೇಂದ್ರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಅಚಾನಕ್‌ ಆಗಿ ಮುಸ್ಲಿಂ ಮಹಿಳೆ ಮೇಲೆ ಹೋಳಿ ಬಣ್ಣ, ಯುವಕನ ಹತ್ಯೆ ಮಾಡಿದ ಆರೋಪಿಗಳ ಮನೆ ಸ್ಥಿತಿ ಈಗ ನೋಡಿ, Video

ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರವೂ ಮಹತ್ವದ್ದೆಂಬ ಚಿಂತನೆ ನರೇಂದ್ರ ಮೋದಿಜೀ ಅವರದು: ವಿಜಯೇಂದ್ರ

ಮುಂದಿನ ಸುದ್ದಿ
Show comments