Publish Date: Wed, 02 Aug 2023 (20:28 IST)
Updated Date: Wed, 02 Aug 2023 (19:31 IST)
ವಿದ್ಯಾರ್ಥಿನಿ ಸೌಜನ್ಯ ಸಾವಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಸರ್ಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಸೌಜನ್ಯ ಸಾವು ಪ್ರಕರಣ ವಿಚಾರವಾಗಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಮತ್ತು ನಮ್ಮ ಕುಟುಂಬದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ, ಆಪಾದನೆ, ವದಂತಿಗಳನ್ನು ಹಬ್ಬಿಸುತ್ತಿರುವುದರ ಬಗ್ಗೆ ಭಕ್ತಾದಿಗಳು ಹಾಗೂ ಸಾರ್ವಜನಿಕರು ಗೊಂದಲಕ್ಕೆ ಈಡಾಗಬಾರದಾಗಿ ವಿನಂತಿಸುತ್ತೇನೆ ಎಂದರು. ಕಾಲೇಜು ವಿದ್ಯಾರ್ಥಿನಿ ಸೌಜನ್ಯಳ ಹತ್ಯೆಯ ಪ್ರಕರಣದಲ್ಲಿ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ, ಸತ್ಯಾಂಶ ಹೊರಬರುವಂತೆ ಸಿಬಿಐ ಮೂಲಕ ತನಿಖೆ ನಡೆಸುವಂತೆ ಸರ್ಕಾರವನ್ನು ಶ್ರೀ ಕ್ಷೇತ್ರದ ಪರವಾಗಿ ಮತ್ತು ನಮ್ಮ ಕುಟುಂಬಸ್ಥರ ಪರವಾಗಿ ಒತ್ತಾಯಿಸುವುದಾಗಿ ತಿಳಿಸಿದ್ದಾರೆ.